ಕಂದಾಯ ಇಲಾಖೆ ಕರ್ನಾಟಕ ಸರ್ಕಾರ

ಕರ್ನಾಟಕ ಸರ್ಕಾರದ ಅಧಿಕೃತ ಅಂತರ್ಜಾಲ

GOK > kandaya > ಪರಿಚಯ
Last modified at 07/07/2018 12:27 by kandaya
​​ಅತಿ ಪುರಾತನ ಕಾಲದಿಂದಲೂ ಯಾವುದೇ ರೀತಿಯ ಸರ್ಕಾರದಲ್ಲಾಗಲೀ, ಅಂದರೆ, ಚಕ್ರಾದಿsಪತ್ಯ, ರಾಜಪ್ರಭುತ್ವ, ನಿರಂಕುಶಪ್ರಭುತ್ವ ಅಥವಾ ಪ್ರಜಾಪ್ರಭುತ್ವ ಕಾಲದಿಂದಲೂ ಭೂನಿರ್ವಹಣೆ, ಭೂಕಂದಾಯ  ಸಂಗ್ರಹಣೆ, ಭೂಮಾಲಿಕತ್ವ ನಿರ್ಬಂಧನೆ ಮತ್ತು ಭೂ ಉಪಯೋಗ ಮತ್ತು ಭೂಸ್ವಾಧೀನ ಹಕ್ಕುಗಳು ಮುಂತಾದವುಗಳೆಲ್ಲವೂ ರಾಜ್ಯ ಸರ್ಕಾರದ ಪ್ರಮುಖ ಜವಾಬ್ದಾರಿಗಳಾಗಿದ್ದವು. ಪ್ರಾಚೀನ ಭಾರತದಲ್ಲಿ ವಾಸ್ತವವಾಗಿ ಸರ್ಕಾರದಲ್ಲಿ ಎರಡು ಇಲಾಖೆಗಳು ಮಾತ್ರ ಅಸ್ತಿತ್ವದಲ್ಲಿರುತ್ತಿದ್ದವು. ಮೊದಲನೆಯದೆಂದರೆ ಭೂನಿರ್ವಹಣೆ ಮತ್ತು ಭೂಕಂದಾಯ ಇಲಾಖೆ ಮತ್ತು ಎರಡನೆಯದೆಂದರೆ ರಾಜ್ಯವನ್ನು ಬಾಹ್ಯ ದಾಳಿಯ ವಿರುದ್ಧ ಹೋರಾಡಲು ಅಗಾಧವಾದ ಭೂಸೇನೆಯ ರಕ್ಷಣಾ ಇಲಾಖೆ.  ಮೊದಲನೇ ಇಲಾಖೆಯು ರಾಜಸ್ವ ಸಂಗ್ರಹಣೆ ಹಾಗೂ ಒಳಾಡಳಿತ ನಿರ್ವಹಣೆಯನ್ನು ಹಾಗೂ ಎರಡನೇ ಇಲಾಖೆಯು ಪ್ರಾಂತ್ಯಗಳ ರಕ್ಷಣೆ ಮತ್ತು ಸಮಗ್ರತೆಯನ್ನು ಬಾಹ್ಯದಾಳಿಗೀಡಾಗುವುದರಿಂದ ರಕ್ಷಿಸುವ ಕಾರ್ಯವನ್ನು ನಿರ್ವಹಿಸುತ್ತಿದ್ದವು. ಸಮಾಜವು ಹೆಚ್ಚು ವೃದ್ದಿಯಾದಂತೆ ವೃತ್ತಿಗಳಲ್ಲಿನ ತಾರತಮ್ಯ, ರಾಜ್ಯದ ಕ್ಲಿಷ್ಠಕರವಾದ ಆಡಳಿತ ನಿರ್ವಹಣೆಗೆ ವಿಶಿಷ್ಠ ಇಲಾಖೆಗಳು ಹೊರಹೊಮ್ಮಿದವು. ಕಾಲ ಬದಲಾವಣೆಯಾದಂತೆ ಹಲವಾರು ಇಲಾಖೆಗಳು ರೂಪಿತಗೊಂಡು ಅಸ್ತಿತ್ವಕ್ಕೆ ಬಂದವು. ವಾಸ್ತವದ ಸಂಗತಿಯೆಂದರೆ ಪ್ರಾರಂಭದಲ್ಲಿ ಎಲ್ಲಾ ಇಲಾಖೆಗಳು ಕಂದಾಯ ಇಲಾಖೆಯಡಿಯಲ್ಲಿಯೇ ಕಾರ್ಯ ನಿರ್ವಹಿಸುತ್ತಿದ್ದು, ನಂತರ ಒಂದೊಂದಾಗಿ ಪ್ರತ್ಯೇಕಗೊಂಡವು. ಏನೇ ಆದರೂ  ಇಂದಿಗೂ ಸಹ ರಾಜ್ಯದ ಹಾಗೂ ಸಮಾಜದ ಪ್ರಮುಖವಾದ ದೈನಂದಿನ ಕೆಲಸ ಕಾರ್ಯಗಳನ್ನು ಕಂದಾಯ ಇಲಾಖೆಯೇ ನಿರ್ವಹಿಸುತ್ತಿದೆ. ಈ ಕಾರಣಗಳಿಂದಾಗಿಯೇ ಸರ್ಕಾರದಲ್ಲಿ ಕಂದಾಯ ಇಲಾಖೆಯು ``ಮಾತೃ ಇಲಾಖೆ”ಯೆಂದು ಕರೆಯಲ್ಪಡುತ್ತದೆ.


 

ಇಲ್ಲಿನ ವಿಷಯಗಳ ಸ್ವತ್ತು ಮತ್ತು ನಿರ್ವಹಣೆ : ಕಂದಾಯ ಇಲಾಖೆ, ಕರ್ನಾಟಕ ಸರ್ಕಾರ

ಹಕ್ಕುತ್ಯಾಗ : ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು.

my widget for counting
Visitors Total

ವಿನ್ಯಾಸ ಮತ್ತು ಅಭಿವೃದ್ಧಿ :ಇ-ಆಡಳಿತ ಕೇಂದ್ರ, ಕರ್ನಾಟಕ ಸರ್ಕಾರ

(C) 2016, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

india-gov-logo
pm india
CM Karnataka logo
nic logo
Top