ಭೂ ಒಡೆತನ ಯೋಜನೆ
ರಾಜ್ಯದಲ್ಲಿನ ಪರಿಶಿಷ್ಟ ಪಂಗಡದ ಭೂ ರಹಿತ ಕೃಷಿ ಕಾರ್ಮಿಕರ ಕುಟುಂಬದ ಮಹಿಳೆಯರಿಗೆ ಮಾತ್ರ ಈ ಯೋಜನೆಯಡಿ ಸೌಲಭ್ಯವನ್ನು ನೀಡಲಾಗುತ್ತದೆ. ಈ ಯೋಜನೆಯಡಿ ಘಟಕ ವೆಚ್ಚ ರೂ.15.00 ಲಕ್ಷವಿದ್ದು, ಪ್ರತಿ ಘಟಕದಲ್ಲಿ 2.00 ಎಕರೆ ಖುಷ್ಕಿ ಅಥವಾ 1.00 ಎಕರೆ ತರಿ ಅಥವಾ ಕನಿಷ್ಟ ಎಕರೆ (20 ಗುಂಟೆ) ಭಾಗಾಯ್ತು ಜಮೀನನ್ನು ಖರೀದಿಸಿ ನೋಂದಣಿ ಮಾಡಿಸಿಕೊಡಲಾಗುವುದು. ಘಟಕ ವೆಚ್ಚದಲ್ಲಿ ಶೇ.50 ಭಾಗ ಸಹಾಯಧನ ಹಾಗೂ ಶೇ.50 ಭಾಗ ಅವಧಿ ಸಾಲದ ರೂಪದಲ್ಲಿ ಇರುತ್ತದೆ. ಅವಧಿಸಾಲವನ್ನು ಶೇ.6 ರ ಬಡ್ಡಿ ದರದಲ್ಲಿ ನಿಗಮದಿಂದಲೇ ನೀಡಲಾಗುವುದು. ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರಚಿಸಿರುವ ಸಮಿತಿಯು ಜಮೀನಿನ ಖರೀದಿ ದರವನ್ನು ನಿಗದಿಪಡಿಸುತ್ತದೆ. ಫಲಾನುಭವಿಗಳು ಸಾಲದ ಹಣವನ್ನು ಬಡ್ಡಿ ಸಮೇತವಾಗಿ ಹತ್ತು ವರ್ಷಗಳಲ್ಲಿ ಪ್ರತಿ 6 ತಿಂಗಳಿಗೊಮ್ಮೆ 20 ಸಮಕಂತುಗಳಲ್ಲಿ ನಿಗಮಕ್ಕೆ ಮರುಪಾವತಿ ಮಾಡಬೇಕು
ಸೌಲಭ್ಯ ಪಡೆಯಲು
ಇರಬೇಕಾದ ಸಾಮಾನ್ಯ ಅರ್ಹತೆಗಳನ್ನು ನೋಡಲು ಇಲ್ಲಿ
ಕ್ಲಿಕ್ ಮಾಡಿ