ಕರ್ನಾಟಕ ರಾಜ್ಯ ಕರಾವಳಿ ವಲಯ ನಿರ್ವಹಣಾ ಪ್ರಾಧಿಕಾರ

ಕರ್ನಾಟಕ ಸರ್ಕಾರ

cmk2k
GOK > ksczma
Last modified at 03/11/2020 11:56 by System Account

​ಕರ್ನಾಟಕ ರಾಜ್ಯ ಕರಾವಳಿ ವಲಯ ನಿರ್ವಹಣಾ ಪ್ರಾಧಿಕಾರ

 new-blinkRevised SPMU Recruitment Notification |SPMU Recruitment Notification | 27th KSCZMA Meeting Notice.

 

ಕರ್ನಾಟಕ ರಾಜ್ಯ ಕರಾವಳಿ ವಲಯ ನಿರ್ವಹಣಾ ಪ್ರಾಧಿಕಾರವನ್ನು ಭಾರತ ಸರ್ಕಾರದ, ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆಯ ಮಂತ್ರಾಲಯವು ಪರಿಸರ (ನಿಯಂತ್ರಣ) ಕಾಯ್ದೆ 1986ರ ನಿಯಮ(3)ರ ಉಪ ನಿಯಮ(1) & (3)ರ ಅಡಿಯಲ್ಲಿ ಕರಾವಳಿ ವಲಯ ನಿರ್ವಹಣ ಅಧಿಸೂಚನೆ 2011ರಲ್ಲಿ ನಿಗಧಿಪಡಿಸಿದ ಕಾರ್ಯವನ್ನು ನಿಯಂತ್ರಿಸಲು ಮತ್ತು ನಿರ್ವಹಿಸುವ ಉದ್ದೇಶದಿಂದ ರಚಿಸಲಾಗಿದೆ. ಪ್ರಾಧಿಕಾರವು ಕರಾವಳಿ ಪರಿಸರದ ಗುಣಮಟ್ಟವನ್ನು ಸುಧಾರಿಸಲು ಮತ್ತು ಸಂರಕ್ಷಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವ ಉದ್ದೇಶವನ್ನು ಹೊಂದಿದೆ.  ಕರ್ನಾಟಕ ರಾಜ್ಯ ಕರಾವಳಿ ನಿಯಂತ್ರಣ ವಲಯಗಳಲ್ಲಿ ಪರಿಸರದ ಮಾಲಿನ್ಯವನ್ನು ತಡೆಗಟ್ಟುವುದು, ತಗ್ಗಿಸುವುದು ಮತ್ತು ನಿಯಂತ್ರಿಸುವ ಉದ್ದೇಶವನ್ನು ಸಹ ಒಳಗೊಂಡಿದೆ.  ಕರಾವಳಿ ನಿಯಂತ್ರಣ ವಲಯದ ವರ್ಗೀಕರಣದಲ್ಲಿ ಬದಲಾವಣೆಗಳಿಗೆ ಅಥವಾ ಬದಲಾವಣೆಗಳಿಗೆ ಪ್ರಸ್ತಾವನೆಗಳನ್ನು ಪರಿಶೀಲಿಸುವ ಹಾಗೂ ಪರಿಸರ (ನಿಯಂತ್ರಣ) ಕಾಯ್ದೆ 1986ರ ನಿಬಂಧನೆಗಳ ಉಲ್ಲಂಘನೆಯ ಪ್ರಕರಣಗಳನ್ನು ವಿಚಾರಿಸುವ ಮತ್ತು CRZ ಅಧಿಸೂಚನೆಯ 2011ರ  ನಿಬಂಧನೆಗಳನ್ನು ಉಲ್ಲಂಘಿಸಿರುವ ಪ್ರಕರಣಗಳನ್ನು ಪರಿಶೀಲಿಸಲು ಪ್ರಾಧಿಕಾರಕ್ಕೆ ಅಧಿಕಾರವನ್ನು ನೀಡಲಾಗಿದೆ.

ಕರ್ನಾಟಕ ರಾಜ್ಯ ಕರಾವಳಿ ವಲಯ ನಿರ್ವಹಣಾ ಪ್ರಾಧಿಕಾರವು  ಕರ್ನಾಟಕ ಸರ್ಕಾರದ, ಅರಣ್ಯ, ಪರಿಸರ ಮತ್ತು  ಜೀವಿಪರಿಸ್ಥಿತಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರ  ಅಧ್ಯಕ್ಷತೆಯಲ್ಲಿ  ಕಾರ್ಯನಿರ್ವಹಿಸುತ್ತದೆ ಹಾಗೂ ಇದರ ಕೇಂದ್ರಸ್ಥಾನವನ್ನು ಬೆಂಗಳೂರಿನಲ್ಲಿ ಸ್ಥಾಪಿಸಲಾಗಿರುತ್ತದೆ.     ವಿಶೇಷ ನಿರ್ದೇಶಕರು (ತಾಂತ್ರಿಕ  ಶಾಖೆ), ಅರಣ್ಯ ಪರಿಸರ ಮತ್ತು ಜೀವ ಪರಿಸ್ಥಿತಿ ಇಲಾಖೆ ಇವರು ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯಾಗಿರುತ್ತಾರೆ ಪರಿಸರ ಹಾಗೂ ಜೀವ ಪರಿಸ್ಥಿತಿ ಇಲಾಖೆಯು ಪ್ರಾಧಿಕಾರಕ್ಕೆ ಸಚಿವಾಲಯದ ಸಹಾಯವನ್ನು ಒದಗಿಸುತ್ತದೆ.  ಮೂರು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿರುವ ಜಿಲ್ಲಾ ಕರಾವಳಿ ನಿರ್ವಹಣಾ ಸಮಿತಿಗಳು ಪ್ರಾಧಿಕಾರದ ಸಂಬಂಧಿಸಿದ ಕಾರ್ಯಗಳನ್ನು ನಿರ್ವಹಿಸಲು ಪ್ರಾಧಿಕಾರಕ್ಕೆ ಸಹಾಯ ಮಾಡುತ್ತವೆ.​​​​​​

ಸಂದರ್ಶಕರು: 10456

ಇಲ್ಲಿನ ವಿಷಯಗಳ ಸ್ವತ್ತು ಮತ್ತು ನಿರ್ವಹಣೆ : ಕರ್ನಾಟಕ ರಾಜ್ಯ ಕರಾವಳಿ ವಲಯ ನಿರ್ವಹಣಾ ಪ್ರಾಧಿಕಾರ, ಕರ್ನಾಟಕ ಸರ್ಕಾರ

ಹಕ್ಕುತ್ಯಾಗ : ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು.

ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ, ಕರ್ನಾಟಕ ಸರ್ಕಾರ

(C) 2016, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

india-gov-logo
pm india
CM Karnataka logo
nic logo
Top